ಕೋಟ: ಕೋಟದ ವಿವೇಕ ಪದವಿಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳು ಎನ್.ಎಂ.ಎಂ.ಎಸ್ (NMMS) ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ತೇರ್ಗಡೆಯಾಗಿದ್ದಾರೆ.
ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾದ

ಕಿಶನ್, ಸೃಜನ್ ಆರ್. ಪೂಜಾರಿ ಮತ್ತು ಪ್ರಸೀದ ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಕೋಟ ವಿದ್ಯಾ ಸಂಘ (ರಿ.), ಕೋಟ, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಹಾಗೂ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.