ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5ರಂದು ವಿವೇಕ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ನೆರವೇರಿಸಲಾಯಿತು.
ಶಾಂತಿ ವಿಹಾರದಲ್ಲಿ ಗಿಡ ನೆಡುವುದರ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಪರಿಸರದ ಕಾಳಜಿ ಮತ್ತು ಉಪಯುಕ್ತತೆ ಬಗ್ಗೆ ತಿಳಿಸಲಾಯಿತು , ಪರಿಸರವೆಂದರೆ ನಮ್ಮ ಸುತ್ತಮುತ್ತಲಿನ ಅವಕಾಶ ಗಿಡಮರ, ಪ್ರಾಣಿ ಪಕ್ಷಿ,ಸಕಲ ಜೀವ ಜಂತುಗಳನ್ನು ಪೋಷಿಸುವ ಜವಾಬ್ದಾರಿ ನಮ್ಮೆಲ್ಲರಲ್ಲೂ ಇದೆ. ಎನ್ನುವ ಜಾಗೃತಿ ಸಂದೇಶವನ್ನು ಇಕೋ ಕ್ಲಬ್ ನ ಸಂಚಾಲಕಿ ಶ್ರೀಮತಿ ನಾಗರತ್ನ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು. ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಶ್ರೀ ಪ್ರೇಮಾನಂದ ಹಾಗೂ ಹಿರಿಯ ಶಿಕ್ಷಕಿ ಶ್ರೀಮತಿ ರತಿಬಾಯಿ ಹಾಗೂ ಎಲ್ಲಾ ಶಿಕ್ಷಕ ವರ್ಗ ಪಾಲ್ಗೊಂಡಿದ್ದರು.