ಕೋಟ : ವಿವೇಕ ವಿದ್ಯಾಸಂಸ್ಥೆಗಳ 2016-17ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ವಿವೇಕದ ಕ್ರೀಡಾಂಗಣದಲ್ಲಿ ಜರುಗಿತು.
ಕ್ರೀಡಾಕೂಟದ ಉದ್ಘಾಟನೆಯನ್ನು ಕೋಟ ವಿದ್ಯಾಸಂಘದ ಕಾರ್ಯದರ್ಶಿಗಳಾದ ಶ್ರೀ ಪಿ. ಸುಬ್ರಹ್ಮಣ್ಯ ಉಪಾಧ್ಯರು ಕ್ರೀಡಾಧ್ವಜವನ್ನು ಅರಳಿಸುವ ಮೂಲಕ ನೆರವೇರಿಸಿ ಮಾತನಾಡಿ “ವಿದ್ಯಾರ್ಥಿಗಳಿಗೆ ಪಾಠ ಹೇಗೆ ಮುಖ್ಯವೋ ಅದೇ ರೀತಿಯಲ್ಲಿ ಕ್ರೀಡೆ ಹಾಗು ಪಾಠೇತರ ಚಟುವಟಿಕೆಗಳು ಅತೀ ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳು ಸ್ವಯಂಸ್ಫೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು. ಸ್ಪರ್ಧಾತ್ಮಕವಾದ ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಸೋಲು ಬಂದಾಗ ಕುಗ್ಗದೇ ಅದನ್ನು ಕ್ರೀಡಾಸ್ಫೂರ್ತಿಯಿಂದ ಸಹಜವಾಗಿ ಸ್ವೀಕರಿಸಬೇಕು. ದೈಹಿಕ ಹಾಗು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ತುಂಬಾ ಸಹಕಾರಿಯಾಗುತ್ತದೆ” ಎಂದು ತಿಳಿಸಿದರು.
ಸಮಾರಂಭದ ಮುಖ್ಯ ಅತಿಥಿಯಾಗಿ, ರಾಜ್ಯ ಹಾಗು ರಾಷ್ಟ್ರಮಟ್ಟದ ಈಜುಗಾರ ಹಾಗೇ ಈಜು ತರಬೇತುದಾರರಾದ ಶ್ರೀ ಪಿ. ಗೋಪಾಲಕೃಷ್ಣ ಅಡಿಗ, ಪಾರಂಪಳ್ಳಿ ಇವರು ಆಗಮಿಸಿ ಶುಭ ಹಾರೈಸಿದರು. ಅಲ್ಲದೇ ಶ್ರೀ ಗೋಪಾಲಕೃಷ್ಣ ಅಡಿಗರನ್ನು ವಿಶೇಷವಾಗಿ ಗುರುತಿಸಿ ಸಂಮ್ಮಾನಿಸಲಾಯಿತು.
ವಿವೇಕ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಗೌರವರಕ್ಷೆಯನ್ನು ಸ್ವೀಕರಿಸಿದರು. ಕ್ರೀಡಾಕೂಟದ ಅಧ್ಯಕ್ಷರೂ, ಕಾಲೇಜಿನ ಪ್ರಾಂಶುಪಾಲರೂ ಆದ ಶ್ರೀ ಕೆ. ಜಗದೀಶ ನಾವುಡರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕ್ರೀಡಾಕೂಟದ ಅರಂಭದಲ್ಲಿ ವಿವೇಕ ವಿದ್ಯಾಸಂಸ್ಥೆಗಳ ಎಲ್ಲಾ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳ ನೆರವಿ, ಕ್ರೀಡಾ ಜ್ಯೋತಿ ಬೆಳಗಿಸುವಿಕೆ, ಇತ್ಯಾದಿ ಕಾರ್ಯಕ್ರಮ ಜರುಗಿತು.
ಸಮಾರಂಭದಲ್ಲಿ ಮುಖ್ಯೋಪಾಧ್ಯಾಯರಾದ ಶ್ರೀ ಎಂ. ರಾಮದೇವ ಐತಾಳ್, ಶ್ರೀ ಕೆ. ಜಗದೀಶ ಹೊಳ್ಳ, ಹಿರಿಯ ಸಹಶಿಕ್ಷಕ ಶ್ರೀ ಎ.ವೆಂಕಟೇಶ ಉಡುಪ, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಬಿ. ವಸಂತ ಶೆಟ್ಟಿ ಉಪಸ್ಥಿತರಿದ್ದರು. ಕ್ರೀಡಾಕೂಟದ ನಿರ್ವಹಣೆಯನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಮಮತಾ, ಶ್ರೀ ಗಣೇಶ್ ಶೆಟ್ಟಿ, ಶ್ರೀ ನವೀನ್ ಕುಮಾರ್ ಶೆಟ್ಟಿ ಹಾಗು ಸಿಬ್ಬಂದಿ ವರ್ಗದವರು ನೆರವೇರಿಸಿ ಕೊಟ್ಟರು.