ವಿವೇಕದ ಅಖಿಲೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪದವಿಪೂರ್ವ ಶಿಕ್ಷಣ ಇಲಾಖೆಯವರು ಶಿವಮೊಗ್ಗದಲ್ಲಿ ನಡೆಸಿದ ರಾಜ್ಯಮಟ್ಟದ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿ ಅಖಿಲೇಶ್ ಇವನು ಟ್ರಿಪಲ್ ಜಂಪ್ ವಿಭಾಗದಲ್ಲಿ ಚಿನ್ನದ ಪದಕ ಹಾಗು ಲಾಂಗ್ ಜಂಪ್‍ನಲ್ಲಿ ಬೆಳ್ಳಿಯ ಪದಕವನ್ನು ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಪಂಜಾಬ್‍ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾನೆ. ಇವನಿಗೆ ಅಲ್ಲಿಯು ಕೂಡಾ ಯಶಸ್ಸು ಸಿಗಲಿ ಎಂದು ವಿವೇಕ ಪ.ಪೂ.ಕಾಲೇಜಿನ ಪ್ರಾಂಶುಪಾಲ ಶ್ರೀ ಕೆ. ಜಗದೀಶ ನಾವಡ ಹಾಗು ಸಿಬ್ಬಂದಿವರ್ಗದವರು ಶುಭ ಹಾರೈಸಿದ್ದಾರೆ.