ಕೋಟ : ಶಾಂತಿವನ ಟ್ರಸ್ಟ್ ಧರ್ಮಸ್ಥಳ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ರಾಜ್ಯಮಟ್ಟದ ಜ್ಞಾನವಿಕಾಸ ಮತ್ತು ಜ್ಞಾನಪ್ರಕಾಶ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಕೋಟ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಶರಧಿ ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಡಾ. ಡಿ. ವೀರೇಂದ್ರ ಹೆಗಡೆಯವರಿಂದ ಪ್ರಶಸ್ತಿ ಸ್ವೀಕರಿಸಿರುತ್ತಾರೆ. ಇವರು ಕೋಟೇಶ್ವರ ಕಟ್ಕೆರೆಯ ಶಿವಾನಂದ ಐತಾಳರು ಮತ್ತು ಶ್ರೀಮತಿ ರೇಖಾ ದಂಪತಿಗಳ ಸುಪುತ್ರಿ.
