ವಿವೇಕದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರದ ಕೋಡಿಯ ಬ್ಯಾರೀಸ್ ಪ.ಪೂ.ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳಾದ

ಅಖಿಲೇಶ್, ಲಾಂಗ್ ಜಂಪ್, 110 ಮೀ.ಹರ್ಡಲ್ಸ್ ಹಾಗು ಟ್ರಿಪಲ್ ಜಂಪ್‍ನಲ್ಲಿ ಪ್ರಥಮ ಸ್ಥಾನ ಗಳಿಸಿ ವೈಯಕ್ತಿಕ ಚಾಂಪಿಯನ್ ಆಗಿ ಮೂಡಿಬಂದಿದ್ದಾನೆ. ಮಂಜುನಾಥ್ 5000 ಮೀ. ಓಟದಲ್ಲಿ ಪ್ರಥಮ, ಧೀರಜ್, ಹ್ಯಾಮರ್ ತ್ರೋನಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಯಶಸ್ಸು ಸಿಗಲಿ ಎಂದು ಸಂಸ್ಥೆಯ ಆಡಳಿತ ಮಂಡಳಿ ಹಾಗು ಮುಖ್ಯಸ್ಥರು ಹಾರೈಸಿದ್ದಾರೆ.